
ಒಂದೇ ಕಾಲದಲ್ಲಿ ಬಾಲಿವುಡ್‌ನಲ್ಲಿ ಸ್ಟಾರ್ ನಟಿಯಾಗಿ ಮಿಂಚಿದ್ದ ಈ ಸುಂದರಿ ನಟಿ, ಸಲ್ಮಾನ್ ಖಾನ್ ಜೊತೆ ತೆರೆ ಹಂಚಿಕೊಂಡು ಅಪಾರ ಜನಪ್ರಿಯತೆ ಗಳಿಸಿದ್ದರು. ತಮ್ಮ ಸೌಂದರ್ಯ ಮತ್ತು ಅಭಿನಯದ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಸೆಳೆದಿದ್ದ ಅವರು, ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ನಟಿಸಿ ಬಾಲಿವುಡ್ ಇಂಡಸ್ಟ್ರಿಯಲ್ಲಿ ಭಾರೀ ಹೆಸರು ಮಾಡಿದ್ದರು.
ಆದರೆ ಕಾಲ ಬದಲಾಗುತ್ತಿದ್ದಂತೆ ಅವರ ಜೀವನವೂ ಸಂಪೂರ್ಣ ಬದಲಾಗಿದೆ. ಒಮ್ಮೆ ಐಷಾರಾಮಿ ಜೀವನ ನಡೆಸುತ್ತಿದ್ದ ನಟಿ ಇಂದು ಜೋಪಡಿಯಲ್ಲಿ ವಾಸಿಸುತ್ತಿದ್ದಾರೆ ಎನ್ನುವ ಸುದ್ದಿ ಅಭಿಮಾನಿಗಳಿಗೆ ಭಾರೀ ಶಾಕ್ ನೀಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಅವರ ಇತ್ತೀಚಿನ ಫೋಟೋಗಳು ವೈರಲ್ ಆಗುತ್ತಿದ್ದು, “ಇಷ್ಟು ದೊಡ್ಡ ನಟಿಗೆ ಈ ಪರಿಸ್ಥಿತಿ ಹೇಗೆ ಬಂತು?” ಎಂದು ಹಲವರು ಪ್ರಶ್ನಿಸುತ್ತಿದ್ದಾರೆ.
ಚಿತ್ರರಂಗದಲ್ಲಿ ಅವಕಾಶಗಳು ಕಡಿಮೆಯಾಗುವುದು, ವೈಯಕ್ತಿಕ ಸಮಸ್ಯೆಗಳು ಹಾಗೂ ಆರ್ಥಿಕ ಸಂಕಷ್ಟಗಳಿಂದ ಅವರ ಬದುಕು ಸಂಪೂರ್ಣ ತಿರುವು ಪಡೆದುಕೊಂಡಿದೆ ಎಂದು ಹೇಳಲಾಗುತ್ತಿದೆ. ಒಂದು ಕಾಲದಲ್ಲಿ ಕ್ಯಾಮೆರಾ ಫ್ಲ್ಯಾಶ್ ಮಧ್ಯೆ ಮೆರೆದಿದ್ದ ನಟಿ ಇಂದು ಸಾಮಾನ್ಯ ಜೀವನ ನಡೆಸುತ್ತಿರುವುದು ಹಲವರ ಮನಸ್ಸು ಮಿಡಿಯುವಂತೆ ಮಾಡಿದೆ.
ಈ ಸುದ್ದಿಯ ಬಳಿಕ ಅಭಿಮಾನಿಗಳು ನಟಿಗೆ ಮತ್ತೆ ಉತ್ತಮ ದಿನಗಳು ಬರಲಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.